ಮಡಿಕೇರಿ, ಡಿ. 18: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಜನವರಿ ತಿಂಗಳ ಮೂರನೇ ವಾರದಲ್ಲಿ ಕಣಿವೆ ಗ್ರಾಮದಲ್ಲಿ ನಡೆಸಲು ಉದ್ದೇಶಿಸಿದೆ. ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಉಪ ಸಮಿತಿಯ ಅಧ್ಯಕ್ಷೆ ಲೇಖಕಿ ಗೀತಾ ಮಂದಣ್ಣ ಅವರ ಅಧ್ಯಕ್ಷತೆಯಲ್ಲಿ ತಾ. 24 ರಂದು ನಗರದ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಲೇಖಕಿಯರು, ಮಹಿಳಾ ಸಂಘಟನೆಗಳ ಮುಖ್ಯಸ್ಥರು, ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಭೆಗೆ ಆಗಮಿಸಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮುಖಾಂತರ ಸಮ್ಮೇಳನದ ಯಶಸ್ಸಿಗೆ ಕಾರಣರಾಗಬೇಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ಸಾಗರ್ ಕೋರಿದ್ದಾರೆ.