ಮಡಿಕೇರಿ, ಡಿ.18 : ಪ್ರಸಕ್ತ 2018-19ನೇ ಸಾಲಿನಿಂದ ಇ-ಆಡಳಿತ ಇಲಾಖೆಯು ಅಭಿವೃದ್ಧಿ ಪಡಿಸಿರುವ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‍ಎಸ್‍ಪಿ) ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನ ಮಂಜೂರು ಮಾಡಬೇಕಾಗಿರುವ ಕಾರಣ ಇದುವರೆಗೆ ಆಧಾರ್ ಸಂಖ್ಯೆಗಳನ್ನು ಬ್ಯಾಂಕ್ ಖಾತೆಗಳಿಗೆ ಜೋಡಣೆ ಮಾಡಿಸದೇ ಇರುವ ವಿದ್ಯಾರ್ಥಿಗಳು ತಾ. 20 ರೊಳಗೆ ತಮ್ಮ ಖಾತೆ ಹೊಂದಿರುವ ಬ್ಯಾಂಕ್ ವ್ಯವಸ್ಥಾಪಕರ ನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳುವದು.

ಇಲ್ಲವಾದಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ ಮಂಜೂರು ಮಾಡಲು ಸಾಧ್ಯವಾಗುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ ಇವರ ಕಚೇರಿಯನ್ನು ಸಂಪರ್ಕಿಸಬಹು ದಾಗಿದೆ. ದೂರವಾಣಿ ಸಂಖ್ಯೆ 08272-223552.