ಸುಂಟಿಕೊಪ್ಪ, ಡಿ. 18: ಸರ್ಕಾರಿ ಪದವಿಪೂರ್ವ ಕಾಲೇಜಿನ 2018-19ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ತಾ. 19 (ಇಂದು) ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಡಿವೈಎಸ್‍ಪಿ ಮುರಳೀಧರ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವೈ.ಎಂ. ಕರುಂಬಯ್ಯ ಸಮಿತಿ ಸದಸ್ಯರುಗಳು ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಜಾನ್ ವಹಿಸಲಿದ್ದಾರೆ. ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.