ಮಡಿಕೇರಿ, ಡಿ. 18: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿಯಾಗಿ ವಿಲ್ಫ್ರೆಡ್ ಕ್ರಾಸ್ತ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯದರ್ಶಿಯಾಗಿದ್ದ ಐತಿಚಂಡ ರಮೇಶ್ ಉತ್ತಪ್ಪ ಅವರು ರಾಜೀನಾಮೆ ನೀಡಿರುವ ಹಿನ್ನೆಲೆ ಈ ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.