ಶನಿವಾರಸಂತೆ, ಡಿ. 18: ಎರಡು ಮೋಟಾರ್ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಬ್ಯಾಡಗೊಟ್ಟ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಸಮೀಪದ ಬೆಸೂರು ಗ್ರಾ.ಪಂ. ವ್ಯಾಪ್ತಿಯ ಜನಾರ್ಧನಹಳ್ಳಿ ಗ್ರಾಮದ ಕಾರ್ ಪೆಯಿಂಟರ್ ತ್ಯಾಗರಾಜ್ ಗಾಯಗೊಂಡ ಚಾಲಕ. ಇವರು ಬೆಂಬಳೂರು ಗ್ರಾಮದಲ್ಲಿ ತಮ್ಮ ಕೆಲಸ ಮುಗಿಸಿ ವಾಪಾಸು ಬರುತ್ತಿರುವಾಗ ಘಟನೆ ನಡೆದಿದೆ. ಶನಿವಾರಸಂತೆ ಕಡೆಯಿಂದ ಬಂದ ಮತ್ತೊಂದು ಬೈಕ್ ಚಾಲಕ ಡಿಕ್ಕಿ ಪಡಿಸಿ ಪರಾರಿಯಾಗಿದ್ದಾನೆ. ಗಾಯಾಳುವಿಗೆ ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ನೀಡಿದ ದೂರಿನ ಅನ್ವಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.