ಮಡಿಕೇರಿ, ಡಿ. 18: ಸಾಲಬಾಧೆಯಿಂದಾಗಿ ಬೇಸತ್ತು ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಲ್ಲಿನ ರಾಜರಾಜೇಶ್ವರಿ ನಗರ ನಿವಾಸಿ, ಹಿರಿಯ ಕ್ಯಾಮರಾಮ್ಯಾನ್ ನಂದ ಗುಜರ್ (46) ಅವರು ಇಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರು ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಮೃತರ ಪತ್ನಿ ನೀಡಿದ ಹೇಳಿಕೆ ಮೇರೆಗೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.