ಮಡಿಕೇರಿ, ಡಿ. 19: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕೊಡವ ಮಕ್ಕಡ ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಾಲ್ಕನೇ ಮಕ್ಕಳ ಕೊಡವ ಜನಪದ ಸಾಂಸ್ಕøತಿಕ ನಮ್ಮೆ ಕಾರ್ಯಕ್ರಮವು ತಾ. 20 ರಂದು ಬೆಳಿಗ್ಗೆ 9 ಗಂಟೆಗೆ ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯಲ್ಲಿ ನಡೆಯಲಿದೆ.
ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ನಾಪೋಕ್ಲು ಅಂಕುರ್ ಎಜುಕೇಷನ್ ಟ್ರಸ್ಟ್‍ನ ಅಧ್ಯಕ್ಷ ಕೇಟೋಳಿರ ರಾಜ ಚೆರ್ಮಣ್ಣ, ಪ್ರಾಂಶುಪಾಲೆ ಕೇಟೋಳಿರ ರತ್ನ ಚರ್ಮಣ್ಣ ಇತರರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11.30 ರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.