ಮಡಿಕೇರಿ, ಡಿ. 20: ಮುಂದಿನ ಜನವರಿಯಲ್ಲಿ ಧಾರವಾಡದಲ್ಲಿ ನಡೆಯಲಿರುವ 84ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂಲತಃ ಕೊಡಗಿನವರಾದ ಎಂ.ಎ. ಪೊನ್ನಪ್ಪ ಅವರು ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಬೆಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷರಾಗಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಪೊನ್ನಪ್ಪ ಅವರು, ಈ ಸಮ್ಮೇಳನದಲ್ಲಿ ಇತರ ಸಾಧಕರೊಂದಿಗೆ ಸನ್ಮಾನಕ್ಕೆ ಆಯ್ಕೆಗೊಂಡಿದ್ದಾರೆ.