ನಾಪೆÇೀಕ್ಲು, ಡಿ. 19: ಗ್ರಾಮಗಳ ಅಭಿವೃದ್ಧಿಯೇ ನಬಾರ್ಡ್‍ನ ಗುರಿಯಾಗಿದೆ. ಆದುದರಿಂದ ಸಂಘ-ಸಂಸ್ಥೆಗಳು ನಬಾರ್ಡ್‍ನ ಸಹಾಯದೊಂದಿಗೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ನಬಾರ್ಡ್‍ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಮುಂಡಂಡ ಸಿ. ನಾಣಯ್ಯ ಹೇಳಿದರು.

ಕಕ್ಕಬೆ ಫಾರ್ಮರ್ಸ್ ಕ್ಲಬ್ ಮತ್ತು ನಬಾರ್ಡ್ ಸಂಸ್ಥೆಯ ಸಹಯೋಗದಲ್ಲಿ ಕಕ್ಕಬೆ ಕ್ಲಬ್‍ನಲ್ಲಿ ಆಯೋಜಿಸಲಾಗಿದ್ದ ಅಭಿವೃದ್ಧಿಯ ಬಗ್ಗೆ ವಿಚಾರ ಸಂಕೀರ್ಣ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸರಕಾರ ಗ್ರಾಮಾಭಿವೃದ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಆದರೆ ಅದರ ಪ್ರಯೋಜನ ಪಡೆಯಲು ಯಾರೂ ಹೆಚ್ಚಿನ ಒಲವು ತೋರುತ್ತಿಲ್ಲ. ಆದುದರಿಂದ ಈ ಬಗ್ಗೆ ಜನ ಜಾಗೃತರಾಗುವದರ ಮೂಲಕ ತಮ್ಮ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಫಾರ್ಮರ್ಸ್ ಕ್ಲಬ್‍ನ ಅಧ್ಯಕ್ಷ ಕೋಟೆರ ಸುರೇಶ್ ಚಂಗಪ್ಪ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಸಂಘ-ಸಂಸ್ಥೆಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ಎಲ್ಲರೂ ಒಗ್ಗಟ್ಟಿನಿಂದ ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕ್ಲಬ್‍ನ ಕಾರ್ಯದರ್ಶಿ ಅನ್ನಾಡಿಯಂಡ ದಿಲೀಪ್ ಕುಮಾರ್, ಸದಸ್ಯರು ಹಾಜರಿದ್ದರು.