ಮಡಿಕೇರಿ, ಡಿ. 22: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ವತಿಯಿಂದ ತಾ. 27 ರಿಂದ 31 ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮ್ಮೇಳನಕ್ಕೆ ಕೊಡಗಿನ 2 ಶಾಲೆ ಗಳಿಂದ ಮೂರು ಕಿರಿಯ ವಿಜ್ಞಾನಿಗಳು ಆಯ್ಕೆಯಾಗಿದ್ದಾರೆ. ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಲೇಖನ ಮುತ್ತಕ್ಕ, ಇದೇ ಶಾಲೆಯ ಎನ್.ಎನ್. ನಿರುತ್ ಹಾಗೂ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯ ಹೆಚ್.ಎಸ್. ತೇಜನ ಈ ಮೂವರು ಕಿರಿಯ ವಿಜ್ಞಾನಿಗಳು ಕರ್ನಾಟಕದ 30 ಮಂದಿ ಕಿರಿಯ ವಿಜ್ಞಾನಿಗಳ ಪೈಕಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.