ಮಡಿಕೇರಿ, ಡಿ. 22: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2018-19ನೇ ಸಾಲಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಯುವಕ/ ಯುವತಿಯರಿಗೆ ವಿವಿಧ ಕೋರ್ಸುಗಳ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿ ನಮೂನೆಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಕಚೇರಿಗೆ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ. ಅಗತ್ಯ ಮಾಹಿತಿಗೆ ಇಲಾಖಾ ವೆಬ್‍ಸೈಟ್ hಣಣಠಿs://goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ: 08272-220214 ನ್ನು ಸಂಪರ್ಕಿಸಬಹುದು.
ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಮಡಿಕೇರಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯ ಮೂಲಕ ಸಹಕಾರ ಸಂಘ-ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮಾತ್ರ 6 ತಿಂಗಳು/180 ದಿನಗಳ ಅವಧಿಯ ದೂರ ಶಿಕ್ಷಣದ ಮೂಲಕ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಜನವರಿ ಮಾಹೆಯಿಂದ ಪ್ರಾರಂಭಿಸಲಾಗುವದು. ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅರ್ಹ ಸಿಬ್ಬಂದಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ದೂರ ಶಿಕ್ಷಣ ಡಿ.ಸಿ.ಎಂ. ತರಬೇತಿಯ ಅರ್ಜಿ ಫಾರಂ ಮತ್ತು ಕೈಪಿಡಿ ಪುಸ್ತಕವನ್ನು ಕೆ.ಐ.ಸಿ.ಎಂ., ಮಡಿಕೇರಿ ತರಬೇತಿ ಸಂಸ್ಥೆ ಹಾಗೂ ಮಡಿಕೇರಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಹಾಸನ ಜಿಲ್ಲಾ ಸಹಕಾರ ಯೂನಿಯನ್‍ಗಳಿಂದ ಪಡೆಯಬಹುದು.
ಅರ್ಜಿ ಮತ್ತು ಕೈಪಿಡಿ ಪುಸ್ತಕದ ಶುಲ್ಕ ರೂ. 200 ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಪಡೆಯಬಹುದು. ಅಂಚೆಯ ಮೂಲಕ ಅರ್ಜಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ರೂ. 10 ಮೌಲ್ಯದ ಸ್ಟಾಂಪ್ ಅಂಟಿಸಿದ ಸ್ವ-ವಿಳಾಸವಿರುವ 12x10 ಅಳತೆಯ ಲಕೋಟೆಯನ್ನು ರೂ. 200 ಗಳ ಡಿ.ಡಿ/ಪೋಸ್ಟಲ್ ಆರ್ಡರ್ ಜೊತೆಗೆ ಲಗತ್ತಿಸಿ ಕಳುಹಿಸಿ ಪ್ರಾಂಶುಪಾಲರಿಂದ ಪಡೆಯಬಹುದು. ತಾ. 31 ರೊಳಗೆ ಸಿಬ್ಬಂದಿಗಳು ಅರ್ಜಿಯನ್ನು ಭರ್ತಿ ಮಾಡಿ ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಅಬ್ಬಿಪಾಲ್ಸ್ ರಸ್ತೆ, ಮುತ್ತಪ್ಪ ದೇವಸ್ಥಾನ ಹತ್ತಿರ, ಮಡಿಕೇರಿ ಇವರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ದೂ. 08272-228437/9902189872, 9535250704, 9449245024 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಪ್ರೋತ್ಸಾಹ ಧನಕ್ಕೆ
ಪ್ರಸಕ್ತ(2018-19) ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ ಶೇ. 74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ. 7 ಸಾವಿರ ಮತ್ತು ಶೇ. 75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ. 15 ಸಾವಿರಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರ ವಿವರಗಳನ್ನು ಇಲಾಖೆಯ ವೆಬ್‍ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ತಪ್ಪದೇ ನೋಂದಾಯಿಸಿಕೊಳ್ಳುವದು. ಆನ್‍ಲೈನ್ ಮೂಲಕ ನೋಂದಾಯಿಸಲು ತಾ. 31 ಕೊನೆಯ ದಿನವಾಗಿದೆ.
ವಿದ್ಯಾರ್ಥಿಯು ಕರ್ನಾಟಕ ರಾಜ್ಯದವರಾಗಿರಬೇಕು. ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ 74.99 ಅಂಕ ಮತ್ತು ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುವದು.
ಆನ್‍ಲೈನ್‍ನಲ್ಲಿ ನೋಂದಣಿ ಮಾಡಲು ಎಸ್.ಎಸ್.ಎಲ್.ಸಿ. ನೋಂದಣಿ ಸಂಖ್ಯೆ, ಆಧಾರ್ ಕಾರ್ಡ್‍ನಲ್ಲಿರುವಂತೆ ನಿಮ್ಮ ಹೆಸರು ಮತ್ತು ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ, ಅರ್ಜಿದಾರರ ಪಾಸ್‍ಪೋರ್ಟ್ ಅಳತೆಯ ಫೋಟೋ, ಸ್ಕ್ಯಾನ್ ಮಾಡಲಾದ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ, ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆ ವಿವರ.
ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1 ನೇ ಮಹಡಿ, ಲೋಟಸ್ ಟವರ್ಸ್, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು ಇವರನ್ನು (ದೂ. 080-22261787 ಇಲಾಖಾ ದೂ. 080-22261789 ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಹಾಗೂ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.