ಮಡಿಕೇರಿ, ಜ. 9: ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವದು.

ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2018ರ ಜನವರಿ 1 ರ ನಂತರ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2018ರ ಜನವರಿ 1 ರಿಂದ ಡಿಸೆಂಬರ್ 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವದು. ಅರ್ಜಿಗಳನ್ನು ಕ್ರೀಡಾ ಇಲಾಖೆಯಿಂದ ಪಡೆದು ತಾ. 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ (ಮ್ಯಾನ್ಸ್ ಕಾಂಪೌಂಡ್) ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಸಲ್ಲಿಸುವದು, ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.