ನಾಪೆÇೀಕ್ಲು, ಜ. 12: ದಿ|| ಮಕ್ಕಿ ಎಸ್.ಸುಬ್ರಾಯ ಅವರ ಸ್ಮರಣಾರ್ಥ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ನಾಪೆÇೀಕ್ಲು ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ತಾ. 19ರಂದು ನಡೆಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ಎಲ್ಲಾ ಶಾಲೆಗಳಿಗೆ ಆಹ್ವಾನ ಪತ್ರಿಕೆಯನ್ನು ಕಳುಹಿಸಲಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಕೋರಿದೆ.