ಸೋಮವಾರಪೇಟೆ, ಜ. 12: ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ವತಿಯಿಂದ ರಾಷ್ಟ್ರಪಿತ ಮಹಾತ್ಮಗಾಂಧಿ ಕುರಿತಾದ ಬಾಪು ಗಾಂಧಿ-ಗಾಂಧಿ ಬಾಪು ರಂಗರೂಪಕ ಇಲ್ಲಿಗೆ ಸಮಿಪದ ಐಗೂರು ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆಯಿತು.

ರಂಗಭೂಮಿಯ ಕಲಾವಿದರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.