ಸುಂಟಿಕೊಪ್ಪ, ಜ. 12: ರಸ್ತೆ ಪಕ್ಕದಲ್ಲಿ ತಡೆಗೋಡೆ ನಿರ್ಮಿಸುವ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಶುಕ್ರವಾರ ಮಧುರಮ್ಮ ಬಡಾವಣೆಯಲ್ಲಿ ನಡೆದಿದೆ.
ಇಲ್ಲಿನ ಮಧುರಮ್ಮ ಬಡಾವಣೆಯಲ್ಲಿರುವ ಪುಷ್ಪಾ ಅವರ ಮನೆಯ ಜಾಗದ ಹಿಂಭಾಗದಲ್ಲಿ ತಾಲ್ಲೂಕು ಪಂಚಾಯತಿಯ ಅನುದಾನದಲ್ಲಿ ರಸ್ತೆ ಕೆಲಸ ಮಂಜೂರಾಗಿದ್ದು, ರಸ್ತೆಯ ಪಕ್ಕದಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಎದುರು ಮನೆಯ ಪ್ರಸಾದ್ ಮತ್ತು ಸೈದು ಎಂಬಿಬ್ಬರೂ ತಡೆಗೋಡೆಗೆÀ ಅಡ್ಡಿಪಡಿಸುತ್ತಿದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪುಷ್ಪಾ ಅವರ ಅಳಿಯ ಪಿ.ಆರ್. ಸುನಿಲ್‍ಕುಮಾರ್ ವಿಚಾರಿಸಲು ಬಂದಾಗ ಪ್ರಸಾದ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲಿನಿಂದ ಹೊಡೆದು ಗಾಯಗೊಳಿಸಿದಲ್ಲದೇ, ಅಲ್ಲೇ ಪಕ್ಕದಲ್ಲಿದ್ದ ಸೈದು ಎಂಬುವವರು ಕೂಡ ಏಕಾಏಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪಿ.ಆರ್.ಸುನಿಲ್ ಕುಮಾರ್ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.