ಶನಿವಾರಸಂತೆ, ಜ. 24: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಶನಿವಾರಸಂತೆ ಹೋಬಳಿ ಘಟಕ ಮತ್ತು ಪ್ರಥಮ ದರ್ಜೆ ಕಾಲೇಜು ಸಹಭಾಗಿತ್ವದಲ್ಲಿ ಸುಲೋಚನ, ಡಾ.ಎಂ.ಜಿ. ನಾಗರಾಜ್ ದಂಪತಿ ಕೊಡಗು ದತ್ತಿ ಉಪನ್ಯಾಸ ಕಾರ್ಯಕ್ರಮ ತಾ. 28 ರಂದು ಬೆಳಿಗ್ಗೆ 11.30ಕ್ಕೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎ.ಎಂ. ಆನಂದ್ ಉದ್ಘಾಟಿಸಲಿದ್ದಾರೆ. ಕಸಾಪ ಹೋಬಳಿ ಘಟಕದ ಅಧ್ಯಕ್ಷ ಸಿ.ಎಂ. ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ಕಸಾಪ ಜಿಲ್ಲಾ ಘಟಕದ ಕೋಶಾಧ್ಯಕ್ಷ ಎಸ್.ಎ. ಮುರಳಿಧರ್ ಪ್ರಾಸ್ತಾವಿಕ ನುಡಿಯಾಡಲಿದ್ದಾರೆ. ಸಮಾಜ ಸೇವಕ ನಾಪಂಡ ಮುತ್ತಪ್ಪ ದತ್ತಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಚ್. ಮಹಮ್ಮದ್ ಗೌಸ್, ಕಸಾಪ ತಾಲೂಕು ಘಟಕದ ಅಧ್ಯಕ್ಷ ವಿಜೇತ್, ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್‍ಕುಮಾರ್, ಪ್ರಾಂಶುಪಾಲ ಈ.ಎಂ. ದಯಾನಂದ್ ಭಾಗವಹಿಸಲಿದ್ದಾರೆ.