ಮಡಿಕೇರಿ, ಜ. 24: ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ತಾ. 21 ರಂದು ನಡೆಯಬೇಕಿದ್ದ ಮಡಿಕೇರಿ ನಗರಸಭೆಯ 2019-20ನೇ ಸಾಲಿನ ಆಯವ್ಯಯ ಅನುಮೋದನೆ ಮುಂಚಿತವಾಗಿ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ಸಾರ್ವಜನಿಕರು, ಸಂಘ-ಸಂಸ್ಥೆಗಳ ಎನ್.ಜಿ.ಒಗಳು ಮತ್ತು ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳ ಸಭೆಯನ್ನು ಕಾರಣಾಂತರದಿಂದ ಮುಂದೂಡಿದ್ದು, ತಾ. 28 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.