ನವದೆಹಲಿ, ಜ. 23: ಲೋಕಸಭಾ ಚುನಾವಣೆ ಘೊಷಣೆಯಾಗುವದಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಾಳಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಎಐಎಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ನೇಮಕ ಮಾಡಿದ್ದು, ಉತ್ತರ ಪ್ರದೇಶ ಪೂರ್ವ ವಿಭಾಗದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.ಇದರೊಡನೆ ಪ್ರಿಯಾಂಕಾಗೆ ಇದೇ ಮೊದಲ ಬಾರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆಯೊಂದನ್ನು ನೀಡಲಾಗಿದೆ. ಪೂರ್ವ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಹೊಣೆ ಹೊತ್ತ ಪ್ರಿಯಾಂಕಾ ಪ್ರಧಾನಿ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿ ಸಹ ಪ್ರಚಾರ ಕಾರ್ಯ ನಡೆಸಲಿದ್ದಾರೆ.

2014 ರ ಲೋಕಸಭಾ ಚುನಾವಣೆಯ ಸಮಯದಲ್ಲೂ ರಾಜಕೀಯ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದ ಅವರು ನಂತರ ಪತಿ ರಾಬರ್ಟ್ ವಾದ್ರಾ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದಿಂದಾಗಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ (ಮೊದಲ ಪುಟದಿಂದ) ರಾಜಕೀಯದಿಂದ ದೂರವೇ ಉಳಿದಿದ್ದರು. ಆದರೆ ಪರೋಕ್ಷವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು, ಸೂಕ್ತ ಸಲಹೆ, ಸೂಚನೆ ನೀಡುತ್ತಿದ್ದರು. ದಿ. ಪ್ರಧಾನಿ ಇಂದಿರಾ ಗಾಂಧಿ ಅವರು ತನ್ನ ಮುದ್ದಿನ ಮೊಮ್ಮಗಳಾದ ಪ್ರಿಯಾಂಕಾ ಗಾಂಧಿ ಅವರೇ ತನ್ನ ಉತ್ತರಾಧಿಕಾರಿ ಎಂದು ಅವರೇ ಒಮ್ಮೆ ಹೇಳಿಕೊಂಡಿದ್ದರು. ಇದೀಗ ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಮೂಲಕ ಪ್ರಿಯಾಂಕಾ ಕಳೆದ ಲೋಕಸಭಾ ಚುನಾವಣೆಯಲ್ಲಿ ಮುಳುಗಿದ್ದ ಕಾಂಗ್ರೆಸ್ ಹಡಗನ್ನು ಮೇಲೆತ್ತಿ, ಮುನ್ನಡೆಸುತ್ತಾರಾ ಎಂಬದನ್ನು ಕಾದು ನೋಡಬೇಕು. ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶದ ಕುರಿತು ಟ್ವಿಟ್ಟರ್ ನಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಅವರ ರಾಜಕೀಯ ಪ್ರವೇಶವನ್ನು ಕೆಲವರು ಸ್ವಾಗತಿಸಿದ್ದರೆ, ಮತ್ತಷ್ಟು ಜನ ಅಣಕಿಸಿದ್ದಾರೆ.