ಮಡಿಕೇರಿ, ಜ.30 : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆ ಯನ್ನು ನಗರದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಖಜಾನೆಯಲ್ಲಿರಿಸಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ. ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯಲ್ಲಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ (ಮೊದಲ ಪುಟದಿಂದ) ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿ ಯವರ ಚಿತಾಭಸ್ಮವನ್ನು ಕೊಂಡೊ ಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.

ಇದೇ ವೇಳೆ ಪೊಲೀಸ್ ಇಲಾಖೆ ಯಿಂದ ಮೂರು ಸುತ್ತುಗಳ ಕುಸಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು.

ಗಾಂಧಿ ಮಂಟಪದಲ್ಲಿ ಸರ್ವ ಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಮಹಾತ್ಮ ಗಾಂಧೀಜಿ ಕುರಿತು ಭಕ್ತಿಗೀತೆ ಹಾಡಿದರು.

ಮಾಜಿ ಸಚಿವರಾದ ಯಂ.ಸಿ.ನಾಣಯ್ಯ, ಪ್ರಬಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ, ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ನಗರಸಭೆ ಸದಸ್ಯರಾದ ಚುಮ್ಮಿ ದೇವಯ್ಯ, ಜುಲೇಕಾಬಿ, ಪ್ರಕಾಶ್ ಆಚಾರ್ಯ, ಕೆ.ಎಂ. ವೆಂಕಟೇಶ್, ಸರ್ವೋದಯ ಸಮಿತಿ ಸದಸ್ಯರಾದ ಕೋಡಿ ಚಂದ್ರಶೇಖರ್, ಅಂಬೆಕಲ್ ಕುಶಾಲಪ್ಪ, ಅಂಬೆಕಲ್ ನವೀನ್, ಸುಬ್ರಮಣಿ, ಎಸ್.ಪಿ. ವಾಸುದೇವ, ಬಿ.ಎ. ರಾಮಯ್ಯ ಜಿ.ಸಿ. ರಮೇಶ್, ಗಾಂಧಿ ಸ್ಮಾರಕ ಸಮಿತಿ ಸದಸ್ಯರಾದ ಕೆ.ಟಿ. ಬೇಬಿಮ್ಯಾಥ್ಯೂ, ಷಂಶುದ್ದಿನ್, ಮುನೀರ್ ಅಹ್ಮದ್, ಸುರಯ್ಯ ಅಬ್ರಾರ್, ನಟೇಶ್ ಗೌಡ, ಬಷೀರ್ ಅಹ್ಮದ್, ಆರ್.ಪಿ. ಚಂದ್ರಶೇಖರ್, ಸುನಿತಾ ಪ್ರೀತು, ಜಿಲ್ಲಾ ಖಜಾನಾಧಿಕಾರಿ ಸತೀಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ, ಪೌರಾಯುಕ್ತ ಎಂ.ಎಲ್. ರಮೇಶ್, ತಹಶೀಲ್ದಾರ್ ಕುಸುಮ, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್, ತೆನ್ನಿರಾ ಮೈನಾ, ಮತ್ತಿತರರು ಇದ್ದರು.

ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿ¸ Àಲಾಯಿತು.

ಸ್ಮಾರಕಕ್ಕೆ ಆಗ್ರಹ : ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಮಾತನಾಡಿ, ಗಾಂಧಿ ಮಂಟಪವನ್ನು ದೆಹಲಿಯ ರಾಜ್‍ಘಾಟ್ ಮಾದರಿ ಯಲ್ಲಿ ಸ್ಮಾರಕ ನಿರ್ಮಿಸುವಂತಾಗ ಬೇಕು ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧೀಜಿಯವರು 1934 ಫೆಬ್ರವರಿ, 21 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಸರ್ವರನ್ನು ಉದ್ದೇಶಿಸಿ ಗಾಂಧಿ ಮೈದಾನದಲ್ಲಿ ಮಾತನಾಡಿದರು. ಈ ಸ್ಥಳ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್, ತೆನ್ನಿರಾ ಮೈನಾ, ಮತ್ತಿತರರು ಇದ್ದರು.

ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿ¸ Àಲಾಯಿತು.

ಸ್ಮಾರಕಕ್ಕೆ ಆಗ್ರಹ : ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಮಾತನಾಡಿ, ಗಾಂಧಿ ಮಂಟಪವನ್ನು ದೆಹಲಿಯ ರಾಜ್‍ಘಾಟ್ ಮಾದರಿ ಯಲ್ಲಿ ಸ್ಮಾರಕ ನಿರ್ಮಿಸುವಂತಾಗ ಬೇಕು ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧೀಜಿಯವರು 1934 ಫೆಬ್ರವರಿ, 21 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಸರ್ವರನ್ನು ಉದ್ದೇಶಿಸಿ ಗಾಂಧಿ ಮೈದಾನದಲ್ಲಿ ಮಾತನಾಡಿದರು. ಈ ಸ್ಥಳ