ನಾಪೆÇೀಕ್ಲು, ಜ. 31: ಜಿಲ್ಲಾ ಪಂಚಾಯಿತಿ ವತಿಯಿಂದ ಸುಮಾರು ರೂ. 3.31 ಲಕ್ಷ ವೆಚ್ಚದಲ್ಲಿ ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ನೂತನ ಅಕ್ಷರ ದಾಸೋಹ ಕೊಠಡಿಯನ್ನು ನಾಪೆÇೀಕ್ಲು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸರಕಾರ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದ್ದರೂ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕೊರತೆ ಉಂಟಾಗುತ್ತಿದೆ. ಆದುದರಿಂದ ಪೆÇೀಷಕರು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಸರಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಲ್ಲೇಟಿರ ಅರುಣ್ ಬೇಬ, ಚೀಯಕಪೂವಂಡ ಮುತ್ತುರಾಣಿ ಅಚ್ಚಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರು, ಮಾಜಿ ಅಧ್ಯಕ್ಷೆ ಕೇಲೇಟಿರ ಪುಷ್ಪಾ, ಮುಖ್ಯ ಶಿಕ್ಷಕ ಸುರೇಶ್ ಕುಮಾರ್, ಶಿಕ್ಷಕರಾದ ಟಿ.ಆರ್. ಸುಬ್ರಮಣಿ, ಗಿರಿಜಾ, ಪುಷ್ಪಾವತಿ, ನೇತ್ರಾವತಿ, ನಸೀಮಾ, ಚಂದ್ರಕಲಾ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.