ಮಡಿಕೇರಿ, ಜ. 31: ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ತಾ. 1 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಡಿಕೇರಿಗೆ ಆಗಮಿಸಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.ಮಧ್ಯಾಹ್ನ 2 ಗಂಟೆಗೆ ಅತಿವೃಷ್ಟಿಯಿಂದ ಸಂತ್ರಸ್ತ ಜನರಿಗಾಗಿ ಮನೆ ನಿರ್ಮಾಣವಾಗುತ್ತಿರುವ ಕರ್ಣಂಗೇರಿ, ಮದೆ ಮತ್ತಿತ್ತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.