ಮಡಿಕೇರಿ, ಜ. 31: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಇವರ ಸಹಸಂಸ್ಥೆಗಳ ಸಹಕಾರದಲ್ಲಿ ತಾ. 3 ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ-2018 ಮತ್ತು ಸಾಂಸ್ಕøತಿಕ ಹಬ್ಬ ಕಾರ್ಯಕ್ರಮ ನಡೆಯಲಿದೆ.
ತಾ. 3 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಾಜಿ ಸಚಿವ ಬಿ. ರಮಾನಾಥ ರೈ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಮಾಜಿ ಸದಸ್ಯರಾದ ಮೋಹನ ಗೌಡ ಇಡ್ಯಡ್ಕ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ 10.30 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ 11.30 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಶಾಸಕ ಎಸ್.ಎಲ್. ಬೋಜೇಗೌಡ ಇತರರು ಪಾಲ್ಗೊಳ್ಳಲಿದ್ದಾರೆ.