ಮಡಿಕೇರಿ, ಜ. 31: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರಾಗಿ ನಾಪೋಕ್ಲುವಿನ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಆಯ್ಕೆಯಾದರು. ಮಡಿಕೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಂಬಿ ಕಾರ್ಯಪ್ಪ ಜಯಗಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಮೂರು ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರುಗಳು ಮತದಾರರಾಗಿರುತ್ತಾರೆ.
ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮಡಿಕೇರಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ, ನಾಪೋಕ್ಲು ಬಿಜೆಪಿ ಸ್ಥಾನೀಯ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.