ಮಡಿಕೇರಿ, ಫೆ. 1: ಕೊಡಗು ಜಿಲ್ಲಾಡಳಿತ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ತಾ. 2 ರಂದು (ಇಂದು) ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ. ಅನುತ್ತೀರ್ಣ ಅಥವಾ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು hಣಣಠಿ://ಞoಜಚಿgu.ಟಿiಛಿ.iಟಿ ಅಂತರ್ಜಾಲ ತಾಣದಲ್ಲಿರುವ ಎನ್‍ಸಿಎಸ್ ಜಾಬ್‍ಪೇರ್ ಎಂಬ ಲಿಂಕ್‍ನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳುವದು. ಆನ್‍ಲೈನ್‍ನಲ್ಲಿ ನೋಂದಾಯಿಸಿ ಕೊಳ್ಳುವ ಅಭ್ಯರ್ಥಿಗಳು ಉದ್ಯೋಗಮೇಳ ನಡೆಯುವ ಸ್ಥಳದಲ್ಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತವಾಗಿದೆ. ಅಭ್ಯರ್ಥಿಗಳು ಕನಿಷ್ಟ 10 ಸ್ವವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ದೂರವಾಣಿ ಸಂಖ್ಯೆ: 08272-225851 ಹಾಗೂ ಸರ್ಕಾರಿ ಪಾಲಿಟೆಕ್ನಿಕ್, ಕುಶಾಲನಗರ, ಸೋಮವಾರಪೇಟೆ ತಾಲೂಕು, ದೂ.ಸಂ: 08276-274334 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಅವರು ತಿಳಿಸಿದ್ದಾರೆ.