ಮಡಿಕೇರಿ, ಫೆ. 1: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ತಾ. 3 ರಂದು ಮೊದಲನೇ ಅಧಿವೇಶನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ 2ನೇ ಅಧಿವೇಶನ 1.30 ರಿಂದ 4.30 ರವರೆಗೆ ನಗರದ ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ), ಸಂತ ಮೈಕಲರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಕೇವಲ ನೀಲಿ ಅಥವಾ ಕಪ್ಪು ಬಣ್ಣದ ಪೆನ್ನು ಉಪಯೋಗಿಸಲು ಅವಕಾಶವಿದೆ. ಅಭ್ಯರ್ಥಿಗಳು ಪರೀಕ್ಷಾ ಸಮಯದ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಲು ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ ಅವರು ತಿಳಿಸಿದ್ದಾರೆ.