ಕೂಡಿಗೆ, ಫೆ. 4 : ಭಾರತ ಸೇವಾದಳ ಜಿಲ್ಲಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ, ಇವರುಗಳ ಸಂಯುಕ್ತ ಅಶ್ರಯದಲ್ಲಿ ತಾ. 6ರಂದು ಹೆಬ್ಬಾಲೆ ಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮೃದಾನದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ನಡೆಯಲ್ಲಿದೆ. ಈ ಮೇಳಕ್ಕೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 600 ವಿಧ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಭಾರತ ಸೇವಾದಳದ ಜಿಲ್ಲಾ ಸಂಘಟಕರು ತಿಳಿಸಿದ್ದಾರೆ.