ಮಡಿಕೇರಿ, ಜ. 4: ನಗರದ ಖಾಸಗಿ ಬಸ್ ನಿಲ್ದಾಣ ಬಳಿ ನಿಶಕ್ತಿಯಿಂದ ಬಳಲುತ್ತಿದ್ದು, ಇಲ್ಲಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಮಕೃಷ್ಣ (61) ಎಂಬ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈತನ ವಾರಸುದಾರರು ಇದ್ದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಅಥವಾ 08272-229000 ಹಾಗೂ 08272- 229333ಗೆ ಸಂಪರ್ಕಿಸಲು ಪೊಲೀಸ್ ಪ್ರಕಟಣೆ ತಿಳಿಸಿದೆ.