ಮಡಿಕೇರಿ, ಫೆ. 4: ಮಡಿಕೇರಿಯ ನೆಹರು ಯುವ ಕೇಂದ್ರ, ಯುವ ಜನ ಮತ್ತು ಕ್ರೀಡಾ ಸಚಿವಾಲಯ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಜಿಲ್ಲಾ ಯುವ ಒಕ್ಕೂಟ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು ಹಾಗೂ ಕೇಂದ್ರ ವಾರ್ತಾ ಇಲಾಖೆ, ಹಾಕತ್ತೂರು ತೊಂಭತ್ತು ಮನೆ ತ್ರಿನೇತ್ರ ಯುವಕ ಸಂಘದ ಆಶ್ರಯದಲ್ಲಿ ಹಾಕತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಮೇಕೇರಿ ಗ್ರಾ.ಪಂ. ಸದಸ್ಯ ಪಿಯೂಶ್ ಪೆರೇರಾ ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಎಂ.ಎಂ. ಅಬೂಬಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಶಾರದ, ತೊಂಬತ್ತುಮನೆಯ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ. ಸುಕುಮಾರ, ಎಂ. ವಾರಿಜ, ಬಿ.ಎಸ್. ಜಯಂತಿ, ಸಿ.ಎಂ. ಮುನೀರ್, ಭವಾನಿ ಶಂಕರ್, ಗಾಯತ್ರಿ ದೇವಿ, ಶ್ರೀಲತಾ, ಸಿಬ್ಬಂದಿ ವರ್ಗದವರಾದ ಶರತ್ ಕುಮಾರ್, ರೋಹಿತ್ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರಾಮಚಂದ್ರ ಸ್ವಾಗತಿಸಿ, ದಿನದ ಮಹತ್ವದ ಬಗ್ಗೆ ಮಾತಾನಾಡಿದರು. ಇದೇ ಸಂದರ್ಭ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.