ಮಡಿಕೇರಿ, ಫೆ. 4: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ತಾ. 5 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಆಯಾಯ ಜಿಲ್ಲೆಯ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ, ದೂರದರ್ಶನ ಕೇಂದ್ರ, ಬೆಂಗಳೂರು ಇಲ್ಲಿ ಅಂತಿಮ ಹಂತದಲ್ಲಿ ಮೌಖಿಕ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗುವದು. ಹೆಚ್ಚಿನ ಮಾಹಿತಿಗೆ ಮೊ. 9448867705/ 9449530245/ 9483549159/ ಅಥವಾ ಬೆಂಗಳೂರಿನ ಕರಾವಿಪ ಕೇಂದ್ರ ಕಚೇರಿ ದೂ.080-26718939 ಇವರನ್ನು ಸಂಪರ್ಕಿಸಬಹುದು.