ಮಡಿಕೇರಿ, ಫೆ. 4: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ತಾ. 5 ಮತ್ತು 6 ರಂದು ವಿವಿಧ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಷಾಲಕ ಬಲಿ), ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಿರುತ್ತದೆ. ಬೆಳಿಗ್ಗೆ 8 ಗಂಟೆಯಿಂದ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆಯ ನಂತರ ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.