ಸೋಮವಾರಪೇಟೆ, ಫೆ. 4: ಇಲ್ಲಿನ ಜೇಸಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ. 6 ರಂದು ಸಂಜೆ 7 ಗಂಟೆಗೆ ಮಾನಸ ಸಭಾಂಗಣದಲ್ಲಿ ನಡೆಯಲಿದೆ.
ಜೇಸಿ ವಲಯಾಧ್ಯಕ್ಷ ಜೇಫಿನ್ ಜಾಯ್ ಪದಗ್ರಹಣ ನೆರವೇರಿಸಲಿದ್ದಾರೆ. ಜೇಸಿ ವಲಯದ ಮಾಜಿ ಕಾರ್ಯದರ್ಶಿ ಡಾ. ಎಂ. ಶಿವಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ರೋಟರಿ ಕ್ಲಬ್ ಅಧ್ಯಕ್ಷ ಪಿ.ಕೆ. ರವಿ, ಜೆವಿಪಿ ಕೆ. ಪ್ರವೀಣ್, ಜೇಸಿ ಅಧ್ಯಕ್ಷ ಕೆ.ಎ. ಪ್ರಕಾಶ್, ನೂತನ ಅಧ್ಯಕ್ಷ ಬಿ.ಜಿ. ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.