ಮಡಿಕೇರಿ, ಫೆ. 4: ಕನ್ನಡ ಪುಸ್ತಕ ಪ್ರಾಧಿಕಾರವು 2016ನೇ ಸಾಲಿನಲ್ಲಿ ಪ್ರಥಮಾ ವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ತಾ. 28 ರವರೆಗೆ ಪ್ರಾಧಿಕಾರದ ವೆಬ್‍ಸೈಟ್: ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಹಾಗೂ ಬೆಂಗಳೂರಿನಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಮತ್ತು ಆಯಾಯ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಕಚೇರಿ ವೇಳೆಯಲ್ಲಿ ಉಚಿತವಾಗಿ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ.
ಎರಡು ಪುಸ್ತಕಗಳ ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ ಬೆಂಗಳೂರು-560002 ಅವರಿಗೆ ತಾ. 28 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom, ದೂರವಾಣಿ ಸಂಖ್ಯೆ 080-22484516/ 22017704 ನ್ನು ಸಂಪರ್ಕಿಸಬಹುದು.