ಚೆಟ್ಟಳ್ಳಿ: ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರದ ಸೈಕಲ್‍ಗಳನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪೇರಿಯನ ಜಯಾನಂದ ವಹಿಸಿದ್ದರು. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವತ್ಸಲ, ಅಭಿವೃದ್ಧಿ ಅಧಿಕಾರಿ ನಂದೀಶ್, ಶಾಲಾ ಪ್ರಬಾರ ಮುಖ್ಯೋಪಾಧ್ಯಾಯ ಸತ್ಯನಾರಾಯಣ, ಶಿಕ್ಷಕರಾದ ಸುನಂದಾ, ಮನೋಜ್, ಪ್ರಸನ್ನ, ನೂತನ ಹಾಗೂ ಪೋಷಕ ವೃಂದದವರು ಇದ್ದರು.ನಾಪೋಕ್ಲು: ಸಮೀಪದ ಎಮ್ಮೆಮಾಡು ಸರಕಾರಿ ಪ್ರೌಢ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ 49 ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರದ ಸೈಕಲ್‍ಗಳನ್ನು ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯೆ ಕೊಡಿಯಂಡ ಇಂದಿರಾ ಹರೀಶ್ ವಿತರಿಸಿದರು.

ಈ ಸಂದರ್ಭ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಿ.ಹೆಚ್. ಮೊೈದು, ಶಾಲಾ ಮುಖ್ಯ ಶಿಕ್ಷಕ ಸುಕ್ರು ದೇವೆಗೌಡ, ಮತ್ತು ಶಿಕ್ಷಕ ವೃಂದ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರು ಇದ್ದರು.