ಮಡಿಕೇರಿ, ಫೆ. 5: ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರಸಭೆಯ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ತಾ. 7 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ಉಪ ವೈದ್ಯಾಧಿಕಾರಿ ಡಾ. ಹೆಚ್.ವಿ. ದೇವದಾಸ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ದಾಮೋದರ್, ದಾನಿಗಳಾದ ಗಾಳಿಬೀಡಿನ ಟಿ.ಆರ್. ವಾಸುದೇವ್, ಔಷಧಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ಜೀವನ್, ಉದ್ಯಮಿಗಳಾದ ಶರಿನ್, ಕೆ.ಎಂ. ಅಪ್ಪಣ್ಣ, ನಗರಸಭಾ ಪೌರಾಯುಕ್ತ ರಮೇಶ್, ದಸಂಸ ಸಂಘಟನಾ ಸಂಚಾಲಕ ಎ.ಪಿ. ದೀಪಕ್ ಮತ್ತಿತರರು ಉಪಸ್ಥಿತರಿರುವರು ಎಂದು ಪತ್ರಿಕಾ ಹೇಳಿಕೆಯಲ್ಲಿ ದಿವಾಕರ್ ತಿಳಿಸಿದ್ದಾರೆ.