ಸೋಮವಾರಪೇಟೆ, ಫೆ. 6: ಸಮೀಪದ ಸಾಂದೀಪನಿ ಶಾಲೆಯಲ್ಲಿ ಜೇಸೀ ಸಂಸ್ಥೆ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದ ಜೇಸೀ ಸಂಸ್ಥೆಯ ನಿಯೋಜಿತ ಅಧ್ಯಕ್ಷ ಬಿ.ಜಿ. ಪುರುಷೋತ್ತಮ್, ದೇಶದ ಸಮಗ್ರತೆಯನ್ನು ಎತ್ತಿಹಿಡಿಯಲು ಎಲ್ಲರೂ ಕಟಿಬದ್ಧರಾಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಜೇಸೀ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.