ಗೋಣಿಕೊಪ್ಪಲು, ಫೆ. 7: ಕಾನೂರು ಗ್ರಾ.ಪಂ. ವ್ಯಾಪ್ತಿಯ ಬಿಟ್ಟಂಬರೆ, ಕೋತೂರು-ಕುಟ್ಟ ಸಂಪರ್ಕ ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.
ರೂ. 15 ಲಕ್ಷ ಅನುದಾನದಲ್ಲಿ ರೂ. 10 ಲಕ್ಷದಲ್ಲಿ ಕಾಂಕ್ರಿಟ್ ರಸ್ತೆ ಮತ್ತು ರೂ. 5 ಲಕ್ಷ ವೆಚ್ಚದಲ್ಲಿ ಡಾಂಬರೀಕರಣಕ್ಕೆ ಬಳಸಲಾಗುವದು ಎಂದು ಶಾಸಕರು ತಿಳಿಸಿದರು.
ಕಾನೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕಾಡ್ಯಮಾಡ ಭರತ್ ಮಾಚಯ್ಯ, ಗ್ರಾ.ಪಂ. ಅಧ್ಯಕ್ಷೆ ಲತಾಕುಮಾರಿ, ಸದಸ್ಯ ಸುಳ್ಳಿಮಾಡ ದೀಪಕ್, ಶಿಲ್ಪಜಯ, ಆರ್.ಎಂ.ಸಿ. ಸದಸ್ಯ ಸುಜಾ ಬೋಪಯ್ಯ, ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಕಾರ್ಯದರ್ಶಿ ಲಾಲ ಭೀಮಯ್ಯ, ಹಿಂದುಳಿದ ವರ್ಗದ ಅಧ್ಯಕ್ಷ ಚಂದ್ರಶೇಖರ್ ಕಾನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಳಮೇಂಗಡ ವಿವೇಕ್, ಫೆಡರೇಷನ್ ನಿರ್ದೇಶಕ ಮಚ್ಚಮಾಡ ಕಂದ ಭೀಮಯ್ಯ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನ ಚಂಗಪ್ಪ, ಟೌನ್ ಬ್ಯಾಂಕ್ ನಿರ್ದೇಶಕ ಮಲ್ಲಂಡ ಮಧು ದೇವಯ್ಯ ಪ್ರಮುಖರಾದ ಎಂ.ಎಂ. ನಂಜಪ್ಪ, ಜಿ.ಎ. ಗಿರೀಶ್ ಗಣಪತಿ, ರಮೇಶ್, ನಾಣಿ, ಕೊಟ್ಟಂಗಡ ಡಾಲಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.