ಮಡಿಕೇರಿ, ಫೆ.7 : ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಸಪ್ತಾಹ ಜಾಥಾಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಇತರರು ಇದ್ದರು. ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಟೋ ಅಸೋಷಿಯೇಷನ್, ಟ್ಯಾಕ್ಸಿ ಅಸೋಷಿ ಯೇಷನ್, ಡ್ರೈವಿಂಗ್ ಸ್ಕೂಲ್ ಸಂಘ ಜಾಥಾದಲ್ಲಿ ಪಾಲ್ಗೊಂಡಿದ್ದರು.ಜಿಲ್ಲಾಧಿಕಾರಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಶಾಲಾ ಕಾಲೇಜು ಹಾಗೂ ಇತರೆ ಕಡೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೊಡಗು ಜಿಲ್ಲೆ ಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ರಸ್ತೆಗಳು ಕಿರಿದಾಗಿವೆ. ಆದ್ದರಿಂದ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ನಿಗಾವಹಿಸುವದು ಅಗತ್ಯ ಎಂದು ಅವರು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಕೊಡಗು ಜಿಲ್ಲೆಯಾದ್ಯಂತ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಅಧೀಕ್ಷಕ ಶಿವಣ್ಣ ಕೆ.ಎ., ಸಲೀಮಾ, ಹಾಗೂ ಮೋಟಾರು ವಾಹನ ನಿರೀಕ್ಷಕರುಗಳಾದ ಯೋಗೇಶ್, ರಾಮಚಂದ್ರ, ರೀಟಾ, ರಾಧಾ, ಮೋಹನ್ ಪ್ರಭಾಕರ್, ಸಂತೋಷ್ ತಿಮ್ಮಯ್ಯ ಇತರರು ಇದ್ದರು.