*ಸಿದ್ದಾಪುರ, ಫೆ. 7: ಸಮೀಪದ ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದ ಫೌಂಡೇಷನ್ ವತಿಯಿಂದ ವಿಕಲಚೇತನ ದಿನಾಚರಣೆ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಅಧಿಕಾರಿ ಅನಿಲ್‍ಕುಮಾರ್, ಸ್ವಾಮಿ ವಿವೇಕಾನಂದ ಫೌಂಡೇಷನ್‍ನ ಕಾರ್ಯಕ್ರಮ ಸಂಯೋಜಕ ಬೋರಪ್ಪ, ಆರೋಗ್ಯ ಕಾರ್ಯಕರ್ತೆ ಸುನಿತ, ಗ್ರಾಮ ಪಂಚಾಯಿತಿ ಸದಸ್ಯರಾದ ಜಮೀಲ, ಕಮಲಮ್ಮ, ನಳಿನಿ, ಕವಿತ, ಸಲೀಮ್ ಹಾಗೂ ಇತರರು ಪಾಲ್ಗೊಂಡಿದ್ದರು.
ವಿಶೇಷಚೇತನರಿಗೆ ಸರ್ಕಾರದಿಂದ ಸಿಗುವ ವಿವಿಧ ಸವಲತ್ತುಗಳ ಬಗ್ಗೆ ಮತ್ತು ಸೌಲಭ್ಯಗಳನ್ನು ಪಡೆಯಲು ಒದಗಿಸಬೇಕಾದ ದಾಖಲೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.