ಕುಶಾಲನಗರ, ಫೆ. 7: ಕೂಡಿಗೆ ಸೈನಿಕ ಶಾಲೆಯ 2018-19ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ತಾ. 9 ರಂದು ನಡೆಯಲಿದೆ.ಅಂದು ಬೆಳಿಗ್ಗೆ 11.30 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ಗೋವಾ ವಿಭಾಗದ ಎನ್‍ಸಿಸಿ ಡೆಪ್ಯೂಟಿ ಡೈರೆಕ್ಟರ್ ಜನರಲ್ ಬ್ರಿಗೇಡಿಯರ್ ಡಿ.ಎಂ. ಪೂರ್ವಿಮಠ್, ವಿಎಸ್‍ಎಂ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಹಾಗೂ ಡಾ. ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ನಿರ್ವಾಹಕ ನಿರ್ದೇಶಕ ಹೆಚ್. ನಟರಾಜ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಯಲಿದೆ ಎಂದು ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಆರ್.ಆರ್. ಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.