ಮಡಿಕೇರಿ, ಫೆ. 8 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಮುತ್ತ್‍ನಾಡ್ ಅಭಿಮಾನಿ ಒಕ್ಕೂಟ ಇವರ ಸಹಯೋಗದಲ್ಲಿ ಕಾಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. 9 ರಂದು ಕೊಡವ ಜಾನಪದ ನಮ್ಮೆ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಸಾಂಸ್ಕøತಿಕ ಸ್ಪರ್ಧೆ ಉದ್ಘಾಟನೆ ನಡೆಯಲಿದೆ. ಗಾಳಿಬೀಡು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಯ್ಯಲಪ್ಪಂಡ ಎ. ಪೊನ್ನಪ್ಪ ಮತ್ತು ಕಾರೇರ ಜಮುನಾ ಪಳಂಗಪ್ಪ ಅವರು ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಮ್ಮತ್ತಾಟ್, ಕೊಡವ ತಿಂಗ ಪೆದ, ಕೋರ್ ಚೌಕ ಕಟ್ಟುವೊ, ಬಾಳೋಪಾಟ್, ತಾಲಿಪಾಟ್, ಪರಿಯಕಳಿ, ಸಮ್ಮಂದ ಅಡ್‍ಕುವೊ, ಪುತ್ತರಿ ಕೋಲಾಟ್, ಬೊಳಕಾಟ್, ಕತ್ತಿಯಾಟ್, ವಾಲಗತ್ತಾಟ್, ಕೊಡವ ಪಾಟ್, ಕೊಡವ ಗಾದೆ ಹೀಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಗಾಳಿಬೀಡು ಗ್ರಾ.ಪಂ. ಅಧ್ಯಕ್ಷ ಪುದಿಯತಂಡ ಸುಭಾಷ್, ಅಯ್ಯಲಪಂಡ ಎ. ಉತ್ತಪ್ಪ, ಕೊಡವ ಭಾಷೆಯ ಸಾಹಿತಿ ನಾಗೇಶ್ ಕಾಲೂರು, ಪೊನ್ನಂಪೇಟೆ ಸಾಯಿಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೋಳೇರ ಝರು ಗಣಪತಿ, ಕೊಡವ ಜನಪದ ಅಭಿಮಾನಿ ಚೆನ್ನಪಂಡ ಮಂದಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.