ಮಡಿಕೇರಿ, ಫೆ. 8 : ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ನಿಯಮಾವಳಿಗಳ ಅನುಷ್ಠಾನದ ಕುರಿತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಾ. 9 ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.