ಮಡಿಕೇರಿ, ಫೆ. 8 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ನೂತನ ಜಿಲ್ಲಾಧಿಕಾರಿ ಹಾಗೂ ಸಂಸ್ಥೆಯ ಅಧ್ಯಕ್ಷರಾಗಿರುವ ಅನೀಸ್ ಕಣ್ಮಣಿ ಜಾಯ್ ಅವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತ ಕಂಬೀರಂಡ ಕಿಟ್ಟು ಕಾಳಪ್ಪ ಹೂಗುಚ್ಛ ನೀಡಿ ಸ್ವಾಗತಿಸಿದರು. ಇದೇ ಸಂದರ್ಭ ಸಂಸ್ಥೆಯ ಕಂಠ ವಸ್ತ್ರವನ್ನು ತೊಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಆಯುಕ್ತೆ ಜಿಮ್ಮಿ ಸಿಕ್ವೇರಾ, ಜಿಲ್ಲಾ ಖಜಾಂಚಿ ಎ.ಡಿ. ಸೋಮಯ್ಯ, ಜಿಲ್ಲಾ ಸ್ಕೌಟ್ಸ್ ವಿಭಾಗದ ತರಬೇತಿದಾರ ಸುರೇಶ್‍ಕುಮಾರ್, ಜಿಲ್ಲಾ ಗೈಡ್ ವಿಭಾಗದ ತರಬೇತಿದಾರರಾದ ಸಗಾಯಮೇರಿ, ಜಿಲ್ಲಾ ಕಾರ್ಯದರ್ಶಿ ಶಾಲಿನಿ ಮತ್ತು ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ ಹಾಜರಿದ್ದರು.