ಸವಿತಾ ಮಹರ್ಷಿ ಜಯಂತಿ

ಮಡಿಕೇರಿ, ಫೆ. 8 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣಾ ಸಮಾರಂಭ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಆಯನೂರು ಮಂಜುನಾಥ್, ಎಸ್.ಎಲ್. ಬೋಜೇಗೌಡ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮಸೋಮಣ್ಣ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿ.ಪಂ. ಸಿಇಓ ಕೆ. ಲಕ್ಷ್ಮಿಪ್ರಿಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್‍ಸಾಗರ್, ಜಿಲ್ಲಾ ಮಡಿವಾಳ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್, ಮಡಿಕೇರಿ ಸರಸ್ವತಿ ಡಿ.ಎಡ್ ಕಾಲೇಜಿನ ಉಪನ್ಯಾಸಕ ಕುಮಾರ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎಚ್.ಎನ್. ವೆಂಕಟೇಶ್ ಇತರರು ಪಾಲ್ಗೊಳ್ಳಲಿದ್ದಾರೆ.