ಕುಶಾಲನಗರ, ಫೆ. 8: ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆ, ವಾಸವಿ ಯುವತಿಯರ ಸಂಘದ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ವಾಹನ ಜಾಗೃತಿ ಜಾಥಾ ನಡೆಯಿತು. ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ವಾಹನ ಜಾಥಾಕ್ಕೆ ವೃತ್ತ ನಿರೀಕ್ಷಕ ಕುಮಾರ ಆರಾಧ್ಯ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಸಾಗಿದ ಸಂಚಾರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಮತ್ತು ಯುವತಿಯರ ಸಂಘದ ಪದಾಧಿಕಾರಿಗಳು ಸಾರ್ವಜನಿಕರಲ್ಲಿ ಸಂಚಾರಿ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭ ಸಂಚಾರಿ ಪೊಲೀಸ್ ಠಾಣಾಧಿಕಾರಿ ಸೋಮೇಗೌಡ, ನಗರ ಪೊಲೀಸ್ ಠಾಣಾಧಿಕಾರಿ ಜಗದೀಶ್, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಲಕ್ಷ್ಮಿ ರವಿಚಂದ್ರ, ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಾದ ಕುಶಾಲಪ್ಪ, ಶ್ರೀನಿವಾಸ್, ಸಹದೇವ್ ಮತ್ತಿತರರು ಇದ್ದರು.