ನಾಪೆÇೀಕ್ಲು, ಫೆ. 8: ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಾಪೆÇೀಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ಕಾಲೇಜು ಕಲಿಕಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೀರಾಜಪೇಟೆ ಸರಕಾರಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ವೇಣು ಗೋಪಾಲ, ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗಾಗಿ ಹಲವು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವದರ ಮೂಲಕ ತಮ್ಮ ಭವಿಷ್ಯ ಕಂಡುಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಪೆÇೀಕ್ಲು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್, ವಿದ್ಯಾರ್ಥಿಗಳು ಪಠ್ಯದೊಂದಿಗೆ ಇತರ ವಿಷಯಗಳನ್ನು ತಮ್ಮ ಜ್ಞಾನ ಸಂಪಾದನೆ ಮಾಡಬೇಕಾಗಿರುವದು ಅಗತ್ಯವಿದೆ.
ಇಂತಹ ಕಾರ್ಯಕ್ರಮಗಳನ್ನು ಸದೂಪಯೋಗಪಡಿಸಿಕೊಳ್ಳುವದರ ಮೂಲಕ ಮುಂದಿನ ಶೈಕ್ಷಣಿಕ ಪ್ರಗತಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕಿ ಪ್ರಾಧ್ಯಾಪಕಿ ಸುನಿತಾ, ಪ್ರಾಧ್ಯಾಪಕರಾದ ಕೆ.ಎಂ. ಮುದ್ದಪ್ಪ, ಲೀನಾ, ಅರವಿಂದ ಮಿತ್ರ, ವಿದ್ಯಾರ್ಥಿನಿ ಪಲ್ಲವಿ ಮತ್ತಿತರರು ಇದ್ದರು.