ಮಡಿಕೇರಿ, ಫೆ. 8: ಕೊಡಗು ವೃತ್ತದ ಮಡಿಕೇರಿ ಅರಣ್ಯ ವಿಭಾಗ, ಸಂಪಾಜೆ ವಲಯದಿಂದ ‘ಬೆಂಕಿಯಿಂದ ಅರಣ್ಯವನ್ನು ರಕ್ಷಿಸಿ’ ಎಂಬ ಜನಜಾಗೃತಿ ಅಭಿಯಾನವನ್ನು ಸಂಪಾಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ವಲಯ ಅರಣ್ಯಾಧಿಕಾರಿ ಶಮಾ ಮತ್ತು ಅರಣ್ಯ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿಗಳು ಬೆಂಕಿಯಿಂದ ಅರಣ್ಯ ಸಂಪತ್ತನ್ನು ರಕ್ಷಿಸುವ ಬಗ್ಗೆ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಕೆ. ಮಾಧವ, ಸದಸ್ಯರಾದ ಸುಮಿತ್ರಾ ರಾಮ ಮೂರ್ತಿ ಹಾಗೂ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ವಿಷ್ಣುನಾಯ್ಕ್, ಗ್ರಾಮ ಅರಣ್ಯ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು. ಪಿ.ಜೆ. ರಾಘವ, ಉಪ ವಲಯ ಅರಣ್ಯಾಧಿಕಾರಿ ನಿರೂಪಿಸಿ, ವಂದಿಸಿದರು.