ಮಡಿಕೇರಿ, ಫೆ. 8: ಹೊದ್ದೂರು ಗ್ರಾ.ಪಂ. ವ್ಯಾಪ್ತಿಯ ಪಾಲೆಮಾಡು ಸೇರಿದಂತೆ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಜಾಗ ಮಂಜೂರಾತಿಗೆ ಕೋರಿ ಸಲ್ಲಿಕೆಯಾಗಿ ರುವ 94 ಸಿ ಮತ್ತು 94 ಸಿಸಿ ಅರ್ಜಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಇಂದು ಬಹುಜನ ಕಾರ್ಮಿ ಕರ ಸಂಘ ಹಾಗೂ ಎಸ್‍ಡಿಪಿಐ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ಕುರಿತು ಹಲವು ಸಮಯಗಳಿಂದ ಪ್ರಯತ್ನ ನಡೆಸುತ್ತಿದ್ದರೂ ಸ್ಪಂದನ ಸಿಗುತ್ತಿಲ್ಲ. ಈ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.