ಕೂಡಿಗೆ, ಫೆ. 9: ಕೊಡಗು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ವಾಲ್ನೂರು-ತ್ಯಾಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಮಾಸಿಕ ಸಭೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಎನ್.ಕೆ. ಪ್ರಭು ಹಾಗೂ ನಿರ್ದೇಶಕರ ಸಮ್ಮುಖದಲ್ಲಿ ನೂತನ ಅಧ್ಯಕ್ಷರಾಗಿ ಹೆಚ್.ಕೆ. ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಪೆರಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲಲಿತ ಅವರನ್ನು ಆಯ್ಕೆ ಮಾಡಲಾಯಿತು.