ಮಡಿಕೇರಿ, ಫೆ. 9: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20ನೇ ಸಾಲಿಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಖ್ಯಾತೆ ಗ್ರಾಮದಲ್ಲಿ 1 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿ 1 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಈ ಎರಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ 19 ಬಾಲಕ ಮತ್ತು 19 ಬಾಲಕಿಯರಿಗೆ ಶೇ.75 ಮೀಸಲಾತಿಯಡಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಠ ಪಂಗಡ ಮತ್ತು ಪ. ಜಾತಿಗೆ ಸೇರಿದ 12 ವಿದ್ಯಾರ್ಥಿಗಳಿಗೆ ಶೇ.25 ಮೀಸಲಾತಿಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆ ದಿನವಾಗಿದೆ. ಪ್ರವೇಶ ಪರೀಕ್ಷೆಯು ಏಪ್ರಿಲ್ 8 ರಂದು ನಡೆಯಲಿದೆ. 6 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಬಹುದು. ಉಚಿತ ಹಾಸಿಗೆ ಮತ್ತು ಹೊದಿಕೆ, ಟ್ರಂಕ್ ಮತ್ತು ಉಚಿತ ಶುಚಿ ಕಿಟ್ ಒದಗಿಸಲಾಗುವದು. ಉಚಿತ ಸಮವಸ್ತ್ರ, ಬೂಟು, ಕಾಲು ಚೀಲ, ಉಚಿತ ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ, ಉಚಿತ ವೈದ್ಯಕೀಯ ಸೌಲಭ್ಯ, ಪ್ರತಿ ಎರಡು ತಿಂಗಳಿಗೊಮ್ಮೆ ಕ್ಷೌರ ವೆಚ್ಚ ರೂ. 60 ರಂತೆ ವಿದ್ಯಾರ್ಥಿಗಳಿಗೆ ಉಚಿತ ವಸತಿಯೊಂದಿಗೆ ಮಾಸಿಕ ರೂ. 1500 ಭೋಜನಾ ವೆಚ್ಚ ಭರಿಸಲಾಗುವದು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿ ಮತ್ತು ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ ಇದೆ.
ಹೆಚ್ಚಿನ ಮಾಹಿತಿಗೆ ವಸತಿ ಶಾಲೆಯ ದೂರವಾಣಿ ಸಂಖ್ಯೆ :08274-298956 (ವಿ.ಪೇಟೆ) ಮತ್ತು 7676473767 (ಸೋ.ಪೇಟೆ) ಹಾಗೂ ಇಲಾಖಾ ವೆಬ್ಸೈಟ್ hಣಣಠಿs://goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ 08272-220214/225528 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವೀನ್ ಅವರು ತಿಳಿಸಿದ್ದಾರೆ.