ಕೂಡಿಗೆ, ಫೆ. 9: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡಿಗೆ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೂಡುಮಂಗಳೂರು ಮತ್ತು ಕೂಡ್ಲೂರು, ಗ್ರಾಮ ಪಂಚಾಯಿತಿ ಕೂಡುಮಂಗಳೂರು ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ಕೂಡುಮಂಗಳೂರು ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ತಾ. 10 ರಂದು (ಇಂದು) ನಡೆಯಲಿದೆ.

8.30ಕ್ಕೆ ಪೂಜೆ ಪ್ರಾರಂಭವಾಗಿ, 11.15ಕ್ಕೆ ಮಹಾಮಂಗಳಾರತಿ, 11.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಿರಿಯಾಪಟ್ಟಣ ರಾವಂದೂರು ಶ್ರೀ ಮುರುಘಮಠದ ಮ.ನಿ.ಪ್ರ. ಮೋಕ್ಷಪತಿ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ.

ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ವೈ, ವಿಎಸ್‍ಎಸ್‍ಎನ್ ಅಧ್ಯಕ್ಷ ಕೆ.ಕೆ. ಹೇಮಂತ್‍ಕುಮಾರ್, ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ್, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯ ಗಿರೀಶ್, ರಾಧ ಮತ್ತಿತರರು ಭಾಗವಹಿಸಲಿದ್ದಾರೆ.